ಮಂಗಳೂರು: ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇಲ್ಲಿನ ಪಟ್ಟೆ ಲಿಂಗಪ್ಪಚಾರ್ಯ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬೆಳಗ್ಗೆ ಶ್ರೀವರಮಹಾಲಕ್ಷ್ಮಿ ಪೂಜೆಯು ಕ್ಷೇತ್ರದ ಶ್ರೀ ಗುರುಮಠದ ಪ್ರಧಾನ ಅರ್ಚಕ ಕೆ ಸುದರ್ಶನ್ ಪುರೋಹಿತರ ಆಚಾರ್ಯತ್ವದಲ್ಲಿ ನಡೆಯಿತು. ಶ್ರೀವರಮಹಾಲಕ್ಷ್ಮಿ ದೇವರನ್ನು ರಜತ ಕಲಶದಲ್ಲಿ ಆಹ್ವಾನಿಸಿ ಪೂಜೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸುವಾಸಿನಿಯರಿಗೆ ವಾಯನ ದಾನ ಮಾಡಲಾಯಿತು. ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಕೆ. ಉಮೇಶ್ ಆಚಾರ್ಯ ಪಾಂಡೇಶ್ವರ, ಶ್ರೀಕಾಳಿಕಾಂಬಾ ವಿನಾಯಕ ದೇವಸ್ಥಾನದ ಮಾಜಿ ಮೊಕ್ತೇಸರರು, ಆಡಳಿತ ಮಂಡಳಿಯ ಮಾಜಿ ಸದಸ್ಯರು, ಶ್ರೀ ಕಾಳಿಕಾಂಬಾ ಸೇವಾ ಸಮಿತಿ, ವಿಶ್ವಬ್ರಾಹ್ಮಣ ಮಹಿಳಾ ಸಮಿತಿ ಸಹಿತ ಹಲವು ಭಕ್ತಾಧಿಗಳು ಉಪಸ್ಥಿತರಿದ್ದರು.