ಜಿಲ್ಲೆ

ಎಸ್ಸೆಸ್ಸೆಲ್ಸಿ ಮಕ್ಕಳ ಟ್ಯೂಷನ್ ಸಮಾರೋಪ

Avinash R

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇದರ ಜ್ಞಾನ ವಿಕಾಸ ಕಾರ್ಯಕ್ರಮದಡಿ 3 ತಿಂಗಳ ಕಾಲ ವಾಮದಪದವು ಹೈಸ್ಕೂಲ್‌ನಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಟ್ಯೂಷನ್ ತರಗತಿಯನ್ನು ಹಮ್ಮಿಕೊಂಡಿದ್ದು, ಇದರ ಸಮಾರೋಪ ಕಾರ್ಯಕ್ರಮ ಗುರುವಾರ ನಡೆಯಿತು.

ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ.ದೀಪ ಪ್ರಜ್ವಲಿಸಿದರು. ವಗ್ಗ ವಲಯದ ಜನಜಾಗೃತಿ ವೇದಿಕೆಯ ಸದಸ್ಯ ನವೀನ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯಶಿಕ್ಷ್ಷಕ ಬಾಲಕೃಷ್ಣ ಸ್ವಾಗತಿಸಿದರು. ಶಿಕ್ಷಕ ಸುಧಾಕರ್ ವಂದಿಸಿದರು. ತಾಲೂಕು ಸಮನ್ವಯಾಧಿಕಾರಿ ಶೃತಿ ನಿರೂಪಿಸಿದರು.