ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.25ರಿಂದ ಏ.6ರವರೆಗೆ ನಡೆಸಿದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಹಿಂದಿನಂತೆ ಈ ವರ್ಷವೂ ಕೂಡಾ ಬಾಲಕಿಯರೆ ಮೇಲು ಗೈ ಸಾಧಿಸಿದ್ದಾರೆ. ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶೇಷ ಎಂದರೆ ಒಬ್ಬಳೇ ವಿದ್ಯಾರ್ಥಿನಿ 625ಕ್ಕೆ 625 ಅಂಕವನ್ನು ಪಡೆದುಕೊಂಡಿದ್ದಾಳೆ.
2024ರ ಮಾ.25ರಿಂದ 2024ರ ಏಪ್ರಿಲ್ 6ರವರೆಗೆ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 6,31,204 ವಿದ್ಯಾರ್ಥಿಗಳು ಪಾಸ್ ಆಗಿದ್ದು ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
2,87,416 (65.90%) ಬಾಲಕರು ಪಾಸ್ ಆಗಿದ್ದು 3,43,788 (81.11%) ಬಾಲಕಿಯರು ಪಾಸ್ ಆಗಿದ್ದಾರೆ. ಈ ಮೂಲಕ SSLC ಪರೀಕ್ಷೆಯಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇನ್ನು ಉಡುಪಿ ಪ್ರಥಮ ಸ್ಥಾನ(94%) ಪಡೆದಿದೆ. ದ್ವಿತೀಯ ಸ್ಥಾನ ದಕ್ಷಿಣ ಕನ್ನಡ(92.12%) ಜಿಲ್ಲೆಗೆ ಸಿಕ್ಕಿದ್ದು ಶಿವಮೊಗ್ಗ (88.67%) ಮೂರನೇ ಸ್ಥಾನ ಪಡೆದಿದೆ. ಇನ್ನು ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ ಯಾದಗಿರಿ (50.59%).
ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿರುವ ಅಂಕಿತಾ ಬಸಪ್ಪ ಎನ್ನುವ ವಿದ್ಯಾರ್ಥಿನಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ರಾಜ್ಯದಲ್ಲಿ 625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾಳೆ.
7 ವಿದ್ಯಾರ್ಥಿಗಳಿಗೆ 625ಕ್ಕೆ 624 ಅಂಕಗಳು ಬಂದಿವೆ. ದಕ್ಷಿಣ ಕನ್ನಡದ ಚಿನ್ಮಯ್ , ಚಿಕ್ಕೊಡಿಯ ಸಿದ್ದಾಂತ್, ಮಧುಗಿರಿಯ ಹರ್ಷಿತಾ ಡಿ. ಎಂ, ಬೆಂಗಳೂರಿನ ವೇದಾ ಪಿ ಶೆಟ್ಟಿ, ಉಡುಪಿಯ ಸಹನಾ, ಶಿರಸಿಯ ದರ್ಶನ್, ಚಿನ್ಮಯ್, ಸಿದ್ದಾಂತ್ ಕೂಡಾ ಡ್ವೀತಿಯ ಸ್ಥಾನದಲ್ಲಿದ್ದಾರೆ.