SSLC Exam-1,Preliminary Meeting 
ಜಿಲ್ಲೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ಪೂರ್ವಭಾವಿ ಸಭೆ ಪರೀಕ್ಷೆ ಪಾರದರ್ಶಕವಾಗಿ ನಡೆಸಿ; ಜಿ¯್ಲÁಽಕಾರಿ ನಿತೀಶï ಕೆ.

ರಾಯಚೂರು ಜಿ¯್ಲೆಯಲ್ಲಿ ಮಾರ್ಚ್ ೨೧ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ ಅತ್ಯಂತ ಪಾರದರ್ಶಕವಾಗಿ ಹಾಗೂ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ಸಂಬAಽಸಿದ ಅಽಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಜಿ¯್ಲÁಽಕಾರಿ ನಿತೀಶ್ ಕೆ ಅವರು ಹೇಳಿದರು.

ನಗರದ ಜಿ¯್ಲÁ ಪಂಚಾಯತï ಸಭಾಂಗಣದಲ್ಲಿ ಸೋಮವಾರ ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ನಿಯೋಜಿತರು ಪಾಲಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲ ಸೌಕರ್ಯ, ಸಿ.ಸಿ.ಟಿವಿ ಕಲ್ಪಿಸುವುದನ್ನು ಮೇಲಾಽಕಾರಿಗಳು ಖಾತರಿಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವೆಬï‌ಕಾಸ್ಟಿಂಗ್ ಕಡ್ಡಾಯವಾಗಿದ್ದು, ವೆಬ್ ಕಾಸ್ಟಿಂಗ್ಗೆ ಅಗತ್ಯವಿರುವ ತಾಂತ್ರಿಕ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿ¯್ಲÁಽಕಾರಿಗಳು ಸಂಬAಽಸಿದ ಅಽಕಾರಿಗಳುಗೆ ಸೂಚನೆ ನೀಡಿದರು.

ಪರೀಕ್ಷೆ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳು ತಲುಪಬೇಕು. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಸಮಯದಲ್ಲಿ ಅನ್ಯ ವ್ಯಕ್ತಿಗಳು, ಸಂಬAಧಪಡದವರು, ಮಾಧ್ಯಮಗಳಿಗೆ ಪ್ರವೇಶವಿರುವುದಿಲ್ಲ.

ವಿದ್ಯಾರ್ಥಿಗಳು ಶಾಂತ ರೀತಿಯಿಂದ ಮುಕ್ತವಾಗಿ ಪರೀಕ್ಷೆ ಬರೆಯುವಂತೆ ವಾತಾವರಣ ಇರಬೇಕು. ಪರೀಕ್ಷಾ ಕೇಂದ್ರಗಳ ಸುತ್ತ ೧೪೪ ಕಲಂ ಜÁರಿ ಇರುತ್ತದೆ. ನಿಯೋಜಿತರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕೆಂದು ಜಿ¯್ಲÁಽಕಾರಿಗಳು ಸಂಬAಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ.ಬಡಿಗೇರ ಅವರು ಪರೀಕ್ಷಾ ಸಿದ್ಧತೆ, ಪರೀಕ್ಷಾ ಕೇಂದ್ರಗಳಲ್ಲಿ ಸೌಕರ್ಯ, ಸಿ.ಸಿ.ಟಿವಿ ಅಳವಡಿಕೆ ಸೇರಿದಂತೆ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿ¯್ಲÁ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಽಕಾರಿ ರಾಹುಲï ತುಕಾರಂ ಪಾಂಡ್ವೆ, ಜಿ¯್ಲÁ ಪೊಲೀಸ ವರಿಷ್ಠಾಽಕಾರಿ ಎಂ.ಪುಟ್ಟಮಾದಯ್ಯ, ಅಪರ ಜಿ¯್ಲÁಽಕಾರಿ ಶಿವಾನಂದ, ಡಯಟï ಉಪ ನಿರ್ದೇಶಕರಾದ ಆರï.ಇಂದಿರಾ, ಕ್ಷೇತ್ರ ಶಿಕ್ಷಣಾಽಕಾರಿಗಳು ಸೇರಿ ಅನೇಕರು ಇದ್ದರು.