ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಆಕಾಶವಾಣಿ ಮತ್ತು ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ಸಹಯೋಗದಲ್ಲಿ ಹಮ್ಮಿಕೊಂಡಿರುವ ಪರೀಕ್ಷಾ ಸಿದ್ಧತಾ ಕಾರ್ಯಕ್ರಮಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ಕುಮಾರ್ ಸೋಮವಾರ ಚಾಲನೆ ನೀಡಿದರು.
ಮಾ.2ರಿಂದ 24ರವರೆಗೆ ರಾಜ್ಯದ 13 ಆಕಾಶವಾಣಿ ಕೇಂದ್ರಗಳಲ್ಲಿ ಪ್ರತಿದಿನ ಮಧ್ಯಾಹ್ನ 2.35ರಿಂದ 3 ಗಂಟೆಯವರೆಗೆ ಏಕಕಾಲದಲ್ಲಿ ಕಾರ್ಯ ಕ್ರಮ ಪ್ರಸಾರವಾಗಲಿದೆ.
ರಾಜ್ಯದ ನುರಿತ ಶಿಕ್ಷಕರು, ಶಿಕ್ಷಣ ತಜ್ಞರು, ಮಾನಸಿಕ ತಜ್ಞರು, ವೈದ್ಯರು, ಸಚಿವರು ಹಾಗೂ ಇಲಾಖಾ ಅಧಿಕಾರಿಗಳು ಪರೀಕ್ಷೆಯ ವಿವಿಧ ಆಯಾಮದ ಮಾಹಿತಿಯನ್ನು ಆಕಾಶವಾಣಿ ಮೂಲಕ ವಿದ್ಯಾರ್ಥಿಗಳಿಗೆ ನೀಡಲಿದ್ದಾರೆ.