ಕಾರಟಗಿ: ತಾಲೂಕು ವ್ಯಾಪ್ತಿಯ ಐದು ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರ ಶಾಂತಿಯುತವಾಗಿ ನಡೆದವು. ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ ಹೂ ನೀಡಿ ಸ್ವಾಗತಿಸಿದರು.
ಕಾರಟಗಿಯ ಕೆಪಿಎಸ್ ಪರೀಕ್ಷಾ ಕೇಂದ್ರ, ಶರಣಬಸವೇಶ್ವರ ಪ್ರೌಢಶಾಲೆ, ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆ , ಗ್ರೀನ್ ವ್ಯಾಲಿ ಪ್ರೌಢಶಾಲೆ, ಸೆಂಟ್ರಲ್ ಪಬ್ಲಿಕ್ ಸ್ಕೂಲ್‌ನ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,580 ರೆಗ್ಯೂಲರ್ ವಿದ್ಯಾರ್ಥಿಗಳ ಪೈಕಿ 1548 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 32 ವಿದ್ಯಾರ್ಥಿಗಳು ಗೈರಾಗಿದ್ದರು.
ಮಕ್ಕಳ ಚಲನವಲನ ಗಮನಿಸಲು ಹಾಗೂ ನಕಲು ತಡೆಯಲು ಸಿಸಿ ಕ್ಯಾಮರಾ ಮೂಲಕ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿತ್ತು. ಕುಡಿವ ನೀರಿನ ಸೇವೆ ಕಲ್ಪಿಸಲಾಗಿತ್ತು. ಆರೋಗ್ಯ ಸಹಾಯಕ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆ ಕೇಂದ್ರಗಳಿಗೆ ನಿಯೋಜಿಸಲಾಗಿತ್ತು.