ಬೆಂಗಳೂರು: ವಿದ್ಯಾರ್ಥಿಗಳ ಹಿತಕ್ಕಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸೂಕ್ತವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಪ್ರತಿಪಾದಿಸಿದ್ದಾರೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಮಂಗಳವಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಾಥಮಿಕ ಶಿಕ್ಷಣ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸೂಕ್ತ ಎಂದರು. ನಮ್ಮ ಸರ್ಕಾರ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು. ಪಂಜಾಬ್ ಸೇರಿ ಹಲವು ರಾಜ್ಯಗಳ ಶಿಕ್ಷಣ ಸಚಿವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ರಾಜ್ಯದಲ್ಲಿಯೂ ವಿದ್ಯಾರ್ಥಿಗಳ ಹಿತಕ್ಕಾಗಿ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಅಂಶವನ್ನು ಪ್ರತಿಪಾದಿಸಿದರು.
ಬಿಸಿಯೂಟ ಸಿಬ್ಬಂದಿ ಗೌರವಧನ ಹೆಚ್ಚಿಸಿ: ಮಧ್ಯಾಹ್ನ ಉಪಹಾರ ಯೋಜನೆಯಲ್ಲಿ ಕೆಲಸ ಮಾಡುವ ಅಡುಗೆ ಸಹಾಯಕರು ಕನಿಷ್ಠ ಸಂಭಾವನೆಯಲ್ಲಿ ದುಡಿಯುತ್ತಿರುವುದರಿಂದ ಕೇಂದ್ರದ ಪಾಲನ್ನು ಹೆಚ್ಚಿಸಬೇಕೆಂದು ಸುರೇಶ್ಕುಮಾರ್ ಮನವಿ ಮಾಡಿದರು. ದ್ದಾರೆ. ಕೇಂದ್ರವು ಮೊದಲಿನಿಂದಲೂ ಕೇವಲ 600 ರೂ. ಮಾತ್ರ ನೀಡುತ್ತಿದೆ. ಇದನ್ನು ಹೆಚ್ಚಿಸುವಂತೆ ಕೋರಿದರು.