ಮಸ್ಕಿಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ನಿಮಿತ್ತ ಶೇ.40ಕ್ಕಿ ಕಡಿಮೆ ಫಲಿತಾಂಶ ಪಡೆದ ಶಾಲೆಗಳ ಮುಖ್ಯಶಿಕ್ಷಕರ ವಿಶೇಷ ಸಭೆಯಲ್ಲಿ ಡಿಡಿಪಿಐ ಕೆ.ಡಿ.ಬಡಿಗೇರ ಮಾತನಾಡಿದರು. ಬಿಇಒ ಸುಜಾತಾ ಹೂನೂರು, ಮುರಳೀಧರ, ಸಿ.ಎ.ಮೇಟಿ ಇದ್ದರು. 
ಜಿಲ್ಲೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಮಾರ್ಗಸೂಚಿ ಪಾಲಿಸಿ

ನರೇಶ್ ಕುಮಾರ್

ಮಸ್ಕಿ: ವಿವಿಧ ಪ್ರಯೋಗಗಳ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಹೆಚ್ಚಿಸುವ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧಾರಣೆ ತರಬೇಕು ಎಂದು ಡಿಡಿಪಿಐ ಕೆ.ಡಿ.ಬಡಿಗೇರ ಹೇಳಿದರು.

ಪಟ್ಟಣದ ಜೋಗಿನ್ ರಾಮಣ್ಣ ಸ್ಮಾರಕ ಪ್ರೌಢಶಾಲೆಯಲ್ಲಿ ಶನಿವಾರ ಎಸ್ಸೆಸ್ಸೆಲ್ಸಿಯಲ್ಲಿ ಮಾನ್ವಿ, ಸಿಂಧನೂರು ಮತ್ತು ಲಿಂಗಸುಗೂರು ತಾಲೂಕಿನ ಶೇ. 40 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳ ಮುಖ್ಯಶಿಕ್ಷಕರ ವಿಶೇಷ ಸಭೆಯಲ್ಲಿ ಮಾತನಾಡಿದರು. ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದೆ. ಶೇ.80 ಫಲಿತಾಂಶ ತರುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು. ಅದಕ್ಕಾಗಿ ಅನೇಕ ಮಾರ್ಗ ಸೂಚಿಗಳನ್ನು ನೀಡಲಾಗಿದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಾಕೀತು ಮಾಡಿದರು.

ಸಿ, ಸಿ ಪ್ಲಸ್ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ತರಗತಿಗಳನ್ನು ಆಯೋಜಿಸಬೇಕು. ಮುಖ್ಯಶಿಕ್ಷಕರು ಕಡ್ಡಾಯವಾಗಿ 12 ಅವಧಿಗಳ ಭೋದನೆ ಮಾಡಬೇಕು. 8, 9, 10ನೇ ತರಗತಿಗಳಲ್ಲಿ ಶಿಕ್ಷಕರು ಹೇಗೆ ಪಾಠ ಮಾಡುತ್ತಾರೆ ಎಂಬುದನ್ನು ವೀಕ್ಷಿಸಬೇಕು.

ಪಾಲಕರ ಸಭೆ, ವಿದ್ಯಾರ್ಥಿಗಳ ಮನೆ ಭೇಟಿ ಕಾರ್ಯಕ್ರಮ ಕಡ್ಡಾಯವಾಗಿ ಮಾಡಬೇಕು ಎಂದು ಡಿಡಿಪಿಐ ತಿಳಿಸಿದರು. ಲಿಂಗಸುಗೂರು ಬಿಇಒ ಸುಜಾತಾ ಹೂನೂರು ಹಾಗೂ 40 ಕ್ಕೂ ಹೆಚ್ಚು ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಭಾಗವಹಿಸಿದ್ದರು.