ಲಿಂಗಸುಗೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ಬರೆಯುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು. 
ಜಿಲ್ಲೆ

ಎಸ್ಸೆಸ್ಸೆಲ್ಸಿ ಅರ್ಧವಾರ್ಷಿಕ ಪರೀಕ್ಷೆ ಆರಂಭ

ಲಿಂಗಸುಗೂರು: ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರಾಜ್ಯ ಪಠ್ಯಕ್ರಮದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆ ಶುಕ್ರವಾರ ಆರಂಭವಾಯಿತು.

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಅರ್ಧವಾರ್ಷಿಕ ಪರೀಕ್ಷೆ ಶುಕ್ರವಾರದಿಂದ ಆರಂಭವಾಗಿದ್ದು, ಸೆ.19ರವರೆಗೆ ನಡೆಯಲಿದೆ.

ತಾಲೂಕಿನ 57 ಸರ್ಕಾರಿ ಪ್ರೌಢಶಾಲೆಯಲ್ಲಿ 4392, ಅನುದಾನಿತ 10 ಪ್ರೌಢಶಾಲೆಗಳಲ್ಲಿ 1009 ಹಾಗೂ 36 ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿ 1602 ವಿದ್ಯಾರ್ಥಿಗಳಿದ್ದಾರೆ.