ಜಿಲ್ಲೆ

ಆಳ್ವಾಸ್ ಸತತ ಐದನೇ ವರ್ಷ ಶೇ.100 : 114 ಮಂದಿಯಿಂದ ಶೇ.90ಕ್ಕಿಂತ ಅಧಿಕ ಅಂಕದ ಸಾಧನೆ

ಸೌಮ್ಯ ಆರ್

ಮೂಡುಬಿದಿರೆ(ದ.ಕ.): ಸಿಬಿಎಸ್‌ಇ ಹತ್ತನೇ ತರಗತಿ ಫಲಿತಾಂಶದಲ್ಲಿ ಆಳ್ವಾಸ್ ಶಾಲೆ ಸತತ ಐದನೇ ವರ್ಷ ಶೇ.100 ಫಲಿತಾಂಶ ದಾಖಲಿಸಿದೆ. 29 ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮೆರೆದಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಶಾಲೆಯಿಂದ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಆಳ್ವಾಸ್ ಪ್ರಥಮ ಸ್ಥಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು.