ಜಿಲ್ಲೆ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಸವರಾಜ ವೀರಪ್ಪ ಗರಗ

ಬ್ಯಾಡಗಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಹಾವೇರಿ ತಾಲೂಕಿನ ಬರಡಿ ಗ್ರಾಮದ ರೇಖಾ ಫಕೀರಪ್ಪ ಗೌಡ್ರ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಸತಿ ನಿಲಯದಲ್ಲಿ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿಂದು ವಾಪಸ್ ವಸತಿ ನಿಲಯದ ಕೊಠಡಿಗೆ ಬಂದಿದ್ದಾಳೆ. ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಹೊಟ್ಟೆನೋವಿನಿಂದ ಆತ್ಮಹತ್ಯೆ: ವಿದ್ಯಾರ್ಥಿನಿ ರೇಖಾ 2 ವರ್ಷದ ಹಿಂದೆ ಋತುಮತಿಯಾಗಿದ್ದಳು. ಆವಾಗಿನಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ.