ಮೈಸೂರು : ( SSLC Student Died Of Heart Attack) ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇದೀಗ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಬಳಿ ಕೆಲ್ಲೂರು ಎಂಬಲ್ಲಿ ನಡೆದಿದೆ.
ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿ. ಮೃತ ದೀಪಿಕಾ.. ನಾಗರಾಜ್, ವಸಂತ ದಂಪತಿ ಪುತ್ರಿ. ಈಕೆ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯಾಗಿದ್ದಳು. ಹೃದಯಾಘಾತದಿಂದ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವು ಸಂಭವಿಸಿದೆ.