ಸವಣೂರ: ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ತಾಲೂಕಿನ ಶಿರಬಡಗಿ ಗ್ರಾಮದ ಕೆರೆಯಲ್ಲಿ ಸೋಮವಾರ ಸಂಜೆ ನಡೆದಿದೆ. ಸುನೀಲ ಪರಮೇಶಪ್ಪ ಲಮಾಣಿ (16) ಮೃತ ದುರ್ದೈವಿ.
ಏ. 2ರಂದು ಗಣಿತ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ಸೋಮವಾರ ಮೃತಪಟ್ಟಿರುವುದು ಕುಟುಂಬಸ್ಥರಿಗೆ ದಿಗಿಲು ಮುಟ್ಟಿಸಿದೆ.
ಸ್ನೇಹಿತನೊಂದಿಗೆ ಈಜಲು ಹೋಗಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ವಿಷಯ ತಿಳಿದ ತಕ್ಷಣ ವಿದ್ಯಾರ್ಥಿ ಸುನೀಲನನ್ನು ಕೆರೆಯಿಂದ ಹೊರತಂದು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟಿದ್ದಾನೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.