ಜಿಲ್ಲೆ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ!

arunakunigal

ಬಾಗಲಕೋಟೆ: ಶಾಲೆಗೆಂದು ಮನೆಯಿಂದ ಹೊರ ಹೋದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಮೃತ ವಿದ್ಯಾರ್ಥಿನಿ ಹುನಗುಂದ ತಾಲೂಕಿನ ಬೇವಿನಮಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದಳು. ಶನಿವಾರದಿಂದ ನಾಪತ್ತೆಯಾಗಿದ್ದ ಆಕೆ ಚಿಕ್ಕಯರನಕೇರಿ ಗ್ರಾಮದ ಬಾವಿಯಲ್ಲಿ ಎರಡು ದಿನದ ಬಳಿಕ ಶವವಾಗಿ ಪತ್ತೆಯಾಗಿದ್ದಾಳೆ. ಇದನ್ನೂ ಓದಿರಿ ತಾಯಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಬಾಲಕಿ ಆತ್ಮಹತ್ಯೆ?

ಶಾಲಾ ಸಮವಸ್ತ್ರ ಧರಿಸಿದ್ದ ಬಾಲಕಿಯ ಶವ ಬಾವಿಯಲ್ಲಿ ತೇಲುತ್ತಿರುವುದನ್ನ ಕಂಡ ಸ್ಥಳೀಯರು ಹುನಗುಂದ ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲಿಸಿದ್ದಾರೆ. ಯಾರೋ ಕಿಡಿಗೇಡಿಗಳು ಕೊಲೆ ಮಾಡಿ ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್​ ತನಿಖೆ ಬಳಿಕ ಸಾವಿಗೆ ಕಾರಣ ತಿಳಿಯಲಿದೆ.