ಜಿಲ್ಲೆ

ವಾಲಿಬಾಲ್‌ನಲ್ಲಿ ಸೇಂಟ್ ಮೇರಿಸ್ ಸಾಧನೆ

ಕಿನ್ನಿಗೋಳಿ: ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ದಾವಣಗೆರೆ ಕ್ರೀಡಾಂಗಣದಲ್ಲಿ ಆ.7ರಿಂದ 10ರ ವರೆಗೆ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಕಿನ್ನಿಗೋಳಿ ಸೇಂಟ್ ಮೇರಿಸ್ ಸೆಂಟ್ರಲ್ ಶಾಲೆ ವಿದ್ಯಾರ್ಥಿಗಳ ತಂಡ ಉತ್ತಮ ಸಾಧನೆಗೈದಿದೆ.

ಪಂದ್ಯಾಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 150 ಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ ಸೇಂಟ್ ಮೇರಿಸ್ ಸೆಂಟ್ರಲ್ ಶಾಲೆ 14ರ ವಯೋಮಿತಿಯ ಬಾಲಕಿಯರ ತಂಡ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಮುಂದಿನ ತಿಂಗಳಲ್ಲಿ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ

17ರ ವಯೋಮಿತಿಯಲ್ಲಿ ನಡೆದ ಬಾಲಕರ ವಿಭಾಗದ ವಾಲಿಬಾಲ್ ತಂಡ ದ್ವಿತೀಯ ಸ್ಥಾನ ಪಡೆದಿದ್ದು, ಬಾಲಕಿಯರ ವಿಭಾಗದ ವಾಲಿಬಾಲ್ ತಂಡ ತೃತೀಯ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರ ದೈಹಿಕ ಶಿಕ್ಷಣ ಉಪನ್ಯಾಸಕ ಚಂದ್ರಕಾಂತ್ ಅವರಿಗೆ ಶಾಲಾ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದರು.