ಕುಂದಾಪುರ: ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಿದ್ಕಲ್‌ಕಟ್ಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಸೇಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನಿಯಾಗಿ ಜಿಲ್ಲಾ ಮಟ್ಟಕೆ ಆಯ್ಕೆಯಾಗಿದೆ. ತಂಡದ ನಾಯಕಿ ಜೋನಿಟಾ ಮೆಂಡೊನ್ಸ್ ಅತ್ಯುತ್ತಮ ಆಲ್‌ರೌಂಡರ್ ಪ್ರಶಸ್ತಿ ಪಡೆದುಕೊಂಡರು.