ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಗಣಕಯಂತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಆಶ್ರಯದಲ್ಲಿ ವ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಐದು ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಕ್ರಮ ಸೋಮವಾರ ನಡೆಯಿತು. ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ವ್ಯಾಜಿಕ್ ಬಸ್ ಫೌಂಡೇಶನ್‌ನ ನವೀನ್ ಮತ್ತು ರಾಹುಲ್ ತರಬೇತಿ ನೀಡಿದರು.
ಗಣಕಯಂತ್ರ ವಿಭಾಗ ಮುಖ್ಯಸ್ಥ ಪ್ರೊ.ಗಣೇಶ್ ಕೆ., ಕಂಪ್ಯೂಟರ್ ಸೈನ್ಸ್ ವಿಭಾಗ ಉಪನ್ಯಾಸಕ ಪ್ರೊ.ರಾಮಚಂದ್ರ ಆಚಾರಿ, ಸಿಬ್ಬಂದಿ ಸುರೇಶ್ ಕೆ. ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗ ಉಪನ್ಯಾಸಕ ರಾಜೇಂದ್ರ ಹೋಬಳಿದಾರ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀನಿಧಿ ಹೆಗ್ಡೆ ನಿರೂಪಿಸಿದರು.