ಜಿಲ್ಲೆ

ವೀರನಹೊಸಳ್ಳಿಯಲ್ಲಿ ಸೆ.1ಕ್ಕೆ ಗಜಪಯಣಕ್ಕೆ ಚಾಲನೆ

ಮೈಸೂರು: ದಸರಾ ಗಜಪಯಣಕ್ಕೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಸೆ.1 ರಂದು ಬೆಳಗ್ಗೆ 9.45ಕ್ಕೆ ತುಲಾ ಲಗ್ನದಲ್ಲಿ ಸಂಭ್ರಮದ ಚಾಲನೆ ದೊರೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಗಜಪಯಣಕ್ಕೆ ಚಾಲನೆ ನೀಡಲಿದ್ದು, ಆನೆಗಳ ಪಟ್ಟಿ ಮತ್ತು ಕಿರು ಪುಸ್ತಕವನ್ನು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಬಿಡುಗಡೆ ಮಾಡುವರು. ಶಾಸಕ ಜಿ.ಡಿ.ಹರೀಶ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಸಂಗಪ್ಪ ತಂಗಡಗಿ, ಮೇಯರ್ ಶಿವಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಶ್ರೀನಿವಾಸ ಪ್ರಸಾದ್, ಸುಮಲತಾ ಅಂಬರೀಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಸಿ.ಅನಿಲ್ ಕುಮಾರ್, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಣ, ಟಿ.ಎಸ್. ಶ್ರೀವತ್ಸ, ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ಮರೆತಿಬ್ಬೇಗೌಡ, ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ದೊಡ್ಡಹೆಜ್ಜೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಬಿಕಾ ಲೋಕೇಶ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

9 ಆನೆಗಳ ಆಗಮನ: ಅಂಬಾರಿ ಆನೆ ಅಭಿಮನ್ಯು (ಮತ್ತಿಗೋಡು ಶಿಬಿರ) ಸೇರಿದಂತೆ 9 ಆನೆಗಳು ಮೊದಲ ತಂಡದಲ್ಲಿ ನಗರಕ್ಕೆ ಅಗಮಿಸಲಿವೆ. ಭೀಮ, ಮಹೇಂದ್ರ (ಮತ್ತಿಗೋಡು), ಅರ್ಜುನ (ಬಳ್ಳೆ), ಧನಂಜಯ, ಗೋಪಿ (ದುಬಾರೆ), ಪಾರ್ಥಸಾರಥಿ (ರಾಮಪುರ), ವಿಜಯ (ದುಬಾರೆ), ವರಲಕ್ಷ್ಮಿ (ಭೀಮನಕಟ್ಟೆ) ಆನೆಗಳು ಆಗಮಿಸಲಿವೆ.