ಜಿಲ್ಲೆ

ಭಾರತ್ ಸ್ಕೌಟ್ಸ್-ಗೈಡ್ಸ್‌ನಲ್ಲಿ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ಮಂಜುನಾಥ ದಳದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಸ್ಕೌಟ್ಸ್ ವಿದ್ಯಾರ್ಥಿಗಳಾದ, ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ರಾಜ್ಯಪಾಲರಿಂದ ಬೆಂಗಳೂರಿನ ಗಾಜಿನ ಮನೆಯಲ್ಲಿ ಪ್ರಶಸ್ತಿಪತ್ರ ಸ್ವೀಕರಿಸಲಿದ್ದಾರೆ.

ಇವರಿಗೆ ಮುಖ್ಯಶಿಕ್ಷಕಿ ಹೇಮಲತಾ ಎಂ.ಆರ್.ಸಲಹೆಯೊಂದಿಗೆ, ನಿವೃತ್ತ ಶಿಕ್ಷಕ ದತ್ತಾತ್ರೇಯ ಗೊಲ್ಲ ಮಾರ್ಗದರ್ಶನದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ, ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ತರಬೇತಿ ನೀಡುತ್ತಿದ್ದಾರೆ.