ಜಿಲ್ಲೆ

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಪ್ರಮುಖ ವಿಚಾರ, ಚರ್ಚೆ ಸಾಮಾನ್ಯ

ಚಿಕ್ಕಬಳ್ಳಾಪುರ: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೇಮಕಾತಿ ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಚರ್ಚೆ ಸಾಮಾನ್ಯ. ಇದಕ್ಕೆ ಕಾರಣ ಪ್ರಮುಖ ವಿಷಯವಾಗಿರುವುದು. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸಂಸದ ಡಾ ಕೆ.ಸುಧಾಕರ್ ತಿಳಿಸಿದ್ದಾರೆ.  
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ನಾಯಕರುಗಳೊಂದಿಗೆ ಚರ್ಚಿಸುವುದಲ್ಲದೇ ಸಂಘಟನೆಯ ವಿಚಾರವಾಗಿ ಮಾರ್ಗದರ್ಶನ ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಬಹಿರಂಗವಾಗಿ ಏನೇ ಮಾತುಗಳು ಕೇಳಿ ಬರುತ್ತಿದ್ದರೂ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಇದಕ್ಕೂ ಮೊದಲು ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.