ಜಿಲ್ಲೆ

ರಾಜ್ಯ ಬಜೆಟ್​ 2025: ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆ, ಮಾಸಾಶನ ಹೆಚ್ಚಳ! Journalist

Journalist : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-2026ನೇ ಸಾಲಿನ ಆಯವ್ಯಯವನ್ನು ಮಂಡಿಸುತ್ತಿದ್ದು, ಮಾಸಾಶನ ಹೆಚ್ಚಳ ಮತ್ತು ಉಚಿತ ಚಿಕಿತ್ಸೆಯಂತಹ ಬಂಪರ್​ ಘೋಷಣೆ ಮಾಡಿದ್ದಾರೆ.

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ 12,000 ರೂ. ಮಾಸಾಶನವನ್ನು 15,000 ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನವನ್ನು 6,000 ರೂ.ಗಳಿಂದ 7,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ʻಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿʼ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ಅವರು ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಸಾರಿಗೆ ಸೌಲಭ್ಯವನ್ನು ಘೋಷಣೆ ಮಾಡಿದ್ದರು. ಇದೀಗ ಮಾಸಾಶನ ಹೆಚ್ಚಳ ಮತ್ತು ಉಚಿತ ಚಿಕಿತ್ಸೆಯಂತಹ ಯೋಜನೆಯನ್ನು ಘೋಷಣೆ ಮಾಡಿದ್ದು, ಪತ್ರಕರ್ತರಿಗೆ ನೆರವಾಗಲಿದೆ.