ಜಿಲ್ಲೆ

ಏಳನೇ ವೇತನ ಆಯೋಗದ ವರದಿ ಜಾರಿ ಮಾಡಿ

ಕಾರವಾರ:ಏಳನೇ ವೇತನ ಆಯೋಗದ ವರದಿಯನ್ನು ಶೀಘ್ರ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಬುಧವಾರ ಮನವಿ ಮಾಡಿದರು.
ವೇತನ ಪರಿಷ್ಕರಣೆ ಸಂಬಂಧ ರಚಿಸಲಾದ ಆಯೋಗದ ಅವಧಿಯನ್ನು 6 ತಿಂಗಳು ವಿಸ್ತರಿಸಲಾಗಿದೆ.

ಆದಷ್ಟು ಬೇಗ ಆಯೋಗದ ವರದಿ ಪಡೆದು, ಅದನ್ನು ಜಾರಿ ಮಾಡಬೇಕು. ವೇತನ ಪರಿಷ್ಕರಣೆ ಮಾಡಬೇಕು.

ಸರ್ಕಾರಿ ನೌಕರರಿಗೆ ಎನ್‌ಪಿಎಸ್ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನಾಯ್ಕ, ರಮೇಶ ನಾಯ್ಕ,ರಾಜು ಪೂಜಾರಿ, ವಿ.ಎಂ.ಹೆಗಡೆ , ಇತರರು ಇದ್ದರು.