ಜಿಲ್ಲೆ

ಸರ್ಕಾರಿ ಕೆಲಸಕ್ಕೆ ಇ-ಸಿಂಧುತ್ವ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ರಮೇಶ್​ ಕುಮಾರ್​​ ಬಿ ಎಡಮೋಳೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳ ನೇಮಕಾತಿಗೆ ಇ-ಸಿಂಧುತ್ವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸುವ ನಿಯಮವನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ.

ರಾಜ್ಯದ ಎಸ್​ಸಿ-ಎಸ್​ಟಿ ಹಾಗೂ ಇತರೆ ಹಿಂದುಳಿದ ವರ್ಗಗಳ ನೇಮಕಾತಿಗೆ ಸಿಂಧುತ್ವ ಪ್ರಮಾಣಪತ್ರ ಪಡೆಯದ ಯಾವುದೇ ವ್ಯಕ್ತಿಯನ್ನು ಸರ್ಕಾರದ ಸೇವೆಗಾಗಲಿ ಅಥವಾ ಸಾರ್ವಜನಿಕ ಕ್ಷೇತ್ರದ ಕಾರ್ಯ ಸಂಸ್ಥೆಯಾಗಲಿ ನೇಮಿಸಿಕೊಳ್ಳಲು ಅವಕಾಶವಿಲ್ಲ.

ಸಿಂಧುತ್ವ ವರದಿ ಸ್ವೀಕೃತವಾಗದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಂತಿಲ್ಲ. ಸಿಂಧುತ್ವ ಪ್ರಮಾಣಪತ್ರಕ್ಕಾಗಿ ಪಡೆಯಲು ಅಭ್ಯರ್ಥಿಗಳು ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ಇದೀಗ ಆನ್​ಲೈನ್ ವ್ಯವಸ್ಥೆ ಜಾರಿಗೊಳಿಸಿರುವುದರಿಂದ ಇನ್ನು ಮುಂದೆ ಹಸ್ತಚಾಲಿತವಾಗಿ ನೀಡುವ ಸಿಂಧುತ್ವ ಪ್ರಮಾಣಪತ್ರ ಅಸಿಂಧು ಎಂದು ಪರಿಗಣಿಸಲು ಸರ್ಕಾರ ನಿರ್ಧರಿಸಿದೆ.