ಜಿಲ್ಲೆ

ಫೆ.28ರಂದು ಆಯೋಗದ ಅಧ್ಯಕ್ಷರ ಪ್ರವಾಸ: ಜಿಲ್ಲೆಯ ವಿವಿಧ ಸ್ಥಳಕ್ಕೆ ಭೇಟಿ

ಮಂಡ್ಯ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶಾಮ್‌ಭಟ್ ಹಾಗೂ ಸದಸ್ಯ ಎಸ್.ಕೆ.ವಂಟಿಗೋಡಿ ಫೆ.28ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 10 ರಿಂದ 1.30ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. 2.30ಕ್ಕೆ ಆಯೋಗದಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿ ಹಾಗೂ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕಾರ, 4.30ಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.