ಜಿಲ್ಲೆ

29ರಂದು ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

ಅವಿನಾಶ್ ಜೈನಹಳ್ಳಿ

ಕರ್ನಾಟಕ ಸ್ಪೋರ್ಟ್ಸ್ ಫೌಂಡೇಷನ್ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆ.29ರಂದು ಸಂಜೆ 6 ಗಂಟೆಗೆ ನಗರದ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದೆ.

ಹಾಕಿ ದಂತಕತೆ ಮೇಜರ್ ಧ್ಯಾನ್‌ಚಂದ್ ಸ್ಮರಣಾರ್ಥ ಈ ಸ್ಪರ್ಧೆಗಳು ನಡೆಯಲಿವೆ. ಇದೇ ಪ್ರಥಮ ಬಾರಿಗೆ ಪುರುಷರು ಹಾಗೂ ಮಹಿಳೆಯರಿಗಾಗಿಯೂ ಸ್ಪರ್ಧೆ ನಡೆಯಲಿವೆ. ಶಾಸಕ ಕೆ.ಹರೀಶ್‌ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉದ್ಯಮಿ ವಿಕ್ರಂ ಇತರರು ಭಾಗವಹಿಸಲಿದ್ದಾರೆ ಎಂದು ಆಯೋಜಕ ಮಹೇಂದ್ರಸಿಂಗ್ ಕಾಳಪ್ಪ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.