ಮಂಡ್ಯ: ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಚೆಸ್ ಟೂರ್ನಿಯಲ್ಲಿ ಅಂಗವಿಕಲರು ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಎಸ್.ಬಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಹೇಳಿದರು.
ನಗರದ ಎಸ್.ಬಿ ಸಮುದಾಯ ಸಭಾಂಗಣದಲ್ಲಿ ಜಿಲ್ಲಾ ಕಿವುಡರ ಸಂಘ, ಸಿಟಿ ಲಯನ್ಸ್ ಸಂಸ್ಥೆ, ಲಯನ್ಸ್ ಸಂಸ್ಥೆ, ಮಧುರ ಲಯನ್ಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಎರಡು ದಿನ ರಾಜ್ಯಮಟ್ಟದ ಕಿವುಡರ ಚೆಸ್ ಟೂರ್ನಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಿವುಡತನವಿರುವ ಪ್ರತಿಭಾವಂತ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ. ಚೆಸ್ ಆಟ ಮನಸ್ಸಿನ ಶಕ್ತಿ ಮತ್ತು ಬುದ್ದಿ ಕೌಶಲತೆಯನ್ನು ಹೆಚ್ಚಿಸುತ್ತದೆ ಎಂದರು.
ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲಾ ಮಾಜಿ ಗರ್ವನರ್ ಡಾ.ರಮೇಶ್ ಮಾತನಾಡಿ, ಟೂರ್ನಿಗೆ ಎಲ್ಲ ರೀತಿಯ ಸಹಕಾರವನ್ನು ಲಯನ್ಸ್ ಸಂಸ್ಥೆಗಳು ನೀಡಿವೆ. ಅಂತೆಯೇ ಲಯನ್ಸ್ ಸಂಸ್ಥೆ ಮತ್ತು ಜಿಲ್ಲಾ ಕಿವುಡರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಮನವಿ ಎಂದರೆ, ಕಿವುಡರಿಗೆ ಒಂದು ಪ್ರತ್ಯೇಕ ಸಭಾಂಗಣ ನಿರ್ಮಾಣಕ್ಕೆ ಜಾಗ ನೀಡಲಿ. ಕೆರೆಯಂಗಳದಲ್ಲಿ ನೀಡಿದರೂ ಸೂಕ್ತ ಕಟ್ಟಡ ನಿರ್ಮಾಣ ಮಾಡಲು ಆರ್ಥಿಕ ನೆರವು ನೀಡುತ್ತೇವೆ ಎಂದು ಹೇಳಿದರು.
ಮೈಸೂರಿನ ಕೆಎಸ್‌ಎ್ಡಿ ಸಂಸ್ಥೆಯ ಜಿ.ವಿ.ಮಹೇಶ್‌ವರ್ಮ, ಕೋಲಾರ ಕೆಎಸ್‌ಎ್ಡಿ ಕಾರ್ಯದರ್ಶಿ ಜಿ.ಎಸ್.ನವೀನ್‌ಕುಮಾರ್, ತುಮಕೂರಿನ ಕುಮಾರ್, ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷ ಆರ್.ಯೋಗೇಶ್, ಉಪಾಧ್ಯಕ್ಷ ರಘು, ಕಾರ್ಯದರ್ಶಿ ಎಂ.ಎಸ್.ಕುಮಾರ್, ಜಂಟಿ ಕಾರ್ಯದರ್ಶಿ ಎಂ.ಚರಣ್, ಖಜಾಂಚಿ ನಂದೀಶ್, ಕ್ರೀಡಾ ಕಾರ್ಯದರ್ಶಿ ವೆಂಕಟೇಶ್ ಪ್ರಸಾದ್ ಇತರರಿದ್ದರು.