ಜಿಲ್ಲೆ

ಫೆ.7ರಂದು ರಾಜ್ಯ ಮಟ್ಟದ ಸಮಾವೇಶ

ಮೈಸೂರು: ಅಖಿಲ ಕರ್ನಾಟಕ ಹಿಂದು ದೇವಾಲಯಗಳ ಅರ್ಚಕರು, ಆಗಮಿಕರು ಮತ್ತು ಉಪಾಧಿವಂತರ ಒಕ್ಕೂಟದ ವತಿಯಿಂದ ಫೆ.7ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಎಂ.ಎಸ್.ವೆಂಕಟಾಚಲಯ್ಯ ತಿಳಿಸಿದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದು, ಈ ವೇಳೆ ಅರ್ಚಕರ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಮಹದೇವಪ್ಪ, ರಘುನಂದನ್, ವೈ.ಸಿ.ಬಸವರಾಜು, ಎಂ.ಸಿ. ಸುರೇಶ್, ಎಚ್.ಡಿ.ಕೋಟೆ ಬಸವರಾಜು ಇದ್ದರು.