ಜಿಲ್ಲೆ

ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯ; ಜಿಮ್ನಾಸ್ಟಿಕ್ ಸಾಧನೆಗೆ ಕಠಿಣ ಪರಿಶ್ರಮ ಮುಖ್ಯ

ಮಂಜುನಾಥ ಅಂಗಡಿ

ಧಾರವಾಡ: ಜಿಮ್ನಾಸ್ಟಿಕ್ ಕ್ರೀಡೆಯಲ್ಲಿ ಸಾಧನೆ ಮೆರೆಯಬೇಕಾದರೆ ಕಠಿಣ ಪರಿಶ್ರಮ, ಶ್ರದ್ಧೆ, ಏಕಾಗ್ರತೆ ಹಾಗೂ ನಿರಂತರ ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
೮ ಜಿಲ್ಲೆಗಳಿಂದ ಪಾಲ್ಗೊಂಡಿರುವ ೩೫೬ ವಿದ್ಯಾರ್ಥಿಗಳು ರಾಷ್ಟಮಟ್ಟದ ಸಾಧನೆಯನ್ನು ಗುರಿಯಾಗಿಸಿಕೊಂಡು ಸ್ಪಽðಸಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಜಿಮ್ನಾಸ್ಟಿಕ್ ಕ್ರೀಡೆ ಸಹಕಾರಿ. ವಿದ್ಯಾರ್ಥಿಗಳು ಜಿಮ್ನಾಸ್ಟಿಕ್ ಕ್ರೀಡಾಕೂಟದಲ್ಲಿ ಜಾಗೃತಿ ವಹಿಸಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಯೋಜನಾ ಉಪ ಸಮನ್ವಯಾಽಕಾರಿ ಎಸ್.ಎಂ. ಹುಡೇದಮನಿ ಸ್ವಾಗತಿಸಿದರು.
ಕ್ಷೇತ್ರ ಶಿಕ್ಷಣಾಽಕಾರಿಗಳಾದ ಉಮಾದೇವಿ ಬಸಾಪೂರ, ಅಶೋಕ ಸಿಂದಗಿ, ಜಿಲ್ಲಾ ಯೋಜನಾ ಉಪ ಸಮನ್ವಯಾಽಕಾರಿ ಜಿ.ಎನ್. ಮಠಪತಿ, ದೈಹಿಕ ಶಿಕ್ಷಣಾಽಕಾರಿ ಶಶಿಧರ ಬಸಾಪೂರ, ಜಿಮ್ನಾಸ್ಟಿಕ್ ತರಬೇತುದಾರ ಎಸ್.ಎಸ್. ಮುರ್ತಗುಡ್ಡೆ, ಜಿ.ಪಂ. ಮಾಜಿ ಅಧ್ಯಕ್ಷ ಎಸ್.ಎಸ್. ಪಾಟೀಲ, ವಕೀಲ ಪಿ.ಎಚ್. ನೀರಲಕೇರಿ, ಗೋಪಾಲ ಜೋಶಿ, ಶಿಕ್ಷಕರಿದ್ದರು.