ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಮತ್ತು ಉಡುಪಿಯ ಎಂಜಿಎಂ ಕಾಲೇಜು ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ವಿಶ್ವ ವಿನಾಯಕ ಹಾಗೂ ಅನನ್ಯಾ ವಿ. ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.