ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತ ನಗರದಲ್ಲಿ ಇತ್ತಿಚೆಗೆ ಜಿಲ್ಲಾಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜು ನಾಗಬನ ಕ್ಯಾಂಪಸ್‌ನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧೃತಿ ಆರ್.ಮೆಂಡನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಡಿಯಾಳಿ ರಾಜೇಶ್ ಮೆಂಡನ್ ಹಾಗೂ ಮಾಲತಿ ಮೆಂಡನ್ ಪುತ್ರಿ. ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಮತ್ತಿತರರು ಅಭಿನಂದಿಸಿದ್ದಾರೆ.