ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಎಸ್.ಎನ್.ವಿ. ಪದವಿ ಪೂರ್ವ ಕಾಲೇಜು ಹಿರಿಯಂಗಡಿ ಕಾರ್ಕಳದಲ್ಲಿ ಬುಧವಾರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ನಾಗಬನ ಕ್ಯಾಂಪಸ್‌ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೃಶಾ 32ಕೆ.ಜಿ ಒಳಗಿನ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪ್ರಜನ್ಯ ರಾಜ್ ಮತ್ತು ಶುಭ್ರ ರಾಜ್ ಅವರ ಪುತ್ರಿ. ವಿದ್ಯಾರ್ಥಿನಿ ಸಾಧನೆಗೆ ಅಜೆಕಾರ್ ಪದ್ಮಗೋಪಾಲ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಪ್ರಾಂಶುಪಾಲರು, ಬೋಧಕ-ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.