ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾಟವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಉದ್ಘಾಟಿಸಿದರು.  
ಜಿಲ್ಲೆ

ಕುಕ್ಕೆಯಲ್ಲಿ ಆಡುವುದು ಕ್ರೀಡಾಳುಗಳ ಸೌಭಾಗ್ಯ : ಹರೀಶ್ ಎಸ್.ಇಂಜಾಡಿ ಅಭಿಮತ

ಸೌಮ್ಯ ಆರ್
ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ರಾಜ್ಯಾದ್ಯಂತ ಅಪಾರ ಭಕ್ತರನ್ನು ಹೊಂದಿದೆ. ಕ್ಷೇತ್ರದ ಪಾವನ ಮಣ್ಣಿನಲ್ಲಿ ಆಟವಾಡುವುದು ಕ್ರೀಡಾಳುಗಳ ಸೌಭಾಗ್ಯ. ರಾಜ್ಯದ ಎಲ್ಲ ಜಿಲ್ಲೆಗಳ ಕ್ರೀಡಾಳುಗಳು ಕ್ಷೇತ್ರಕ್ಕೆ ಆಗಮಿಸುವ ಮೂಲಕ ಇದೀಗ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಎಸ್‌ಎಸ್‌ಪಿಯು ಕಾಲೇಜು ಕ್ರೀಡಾಂಗಣದಲ್ಲಿ ಸೋಮವಾರ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕ- ಬಾಲಕಿಯರ ರಾಜ್ಯಮಟ್ಟದ ನೆಟ್‌ಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಸುಬ್ರಹ್ಮಣ್ಯ ಗ್ರಾಪಂ ಅಧ್ಯಕ್ಷೆ ಸುಜಾತಾ ಕಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ಕಾಲೇಜು ವಿಭಾಗದ ದ.ಕ. ಜಿಲ್ಲಾ ಉಪನಿರ್ದೇಶಕಿ ರಾಜೇಶ್ವರಿ ಎಚ್.ಎಚ್., ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಅಚ್ಯುತ್ತ ಗೌಡ ಬಳ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ವೀಕ್ಷಕ ಗೋಪಾಲಕೃಷ್ಣ, ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ, ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷ ಜಾರ್ಜ್, ಕಾರ್ಯದರ್ಶಿ ಮಮತಾ, ಪ್ರಾಚಾರ್ಯ ಸೋಮಶೇಖರ್ ನಾಯಕ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಪ್ರೌಢಶಾಲಾ ವಿಭಾಗದ ಮುಖ್ಯಗುರು ನಂದಾ ಹರೀಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್., ಕ್ರೀಡಾ ಕಾರ್ಯದರ್ಶಿ ಧನುಶ್, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ, ಉಪಾಧ್ಯಕ್ಷ ಗುಣವರ್ಧನ ಕೆದಿಲ ಮತ್ತಿತರರು ಉಪಸ್ಥಿತರಿದ್ದರು.

ಕುಕ್ಕೆಯಲ್ಲಿ ಕ್ರೀಡೆಗೂ ಪ್ರೋತ್ಸಾಹ