ಜಿಲ್ಲೆ

ರಾಜ್ಯಮಟ್ಟಕ್ಕೆ ಆಯ್ಕೆ

Davangere - Desk - Mahesh Babu E

ಚಿತ್ರದುರ್ಗ: ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಎಸ್‌ಆರ್‌ಎಸ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯರಾದ ವಿಜಯಲಕ್ಷ್ಮಿ ಭಾಸಗಿ, ಡಿ.ಎಂ.ಭೂಮಿಕಾ, ತ್ಯಾಜ್ಯ ಪೇಪರ್‌ಗಳಿಂದ ಹೊಸ ಕಾಗದ ತಯಾರಿಸುವ ವಿಧಾನದ ಪ್ರಾಜೆಕ್ಟ್ ಪ್ರಸ್ತುತಪಡಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಎಸ್‌ಆರ್‌ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ.ಎಲ್.ಅಮೋಘ್, ಶಾಲೆಯ ಶಿಕ್ಷಕ ರಾಘವೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.