ಜಿಲ್ಲೆ

ರಾಜ್ಯ ಮಟ್ಟಕ್ಕೆ ಆಯ್ಕೆ

ಶಿವಶಂಕರ್ ಎಂ. ಹೆಬ್ಬಳ್ಳ

ನಾಪೋಕ್ಲು:ಇಲ್ಲಿಗೆ ಸಮೀಪದ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ಶಾಲೆಯ ದರ್ಶಾ ದೇಚಮ್ಮ ಹಾಗೂ ಶಮಂತ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಸ್ಥಾಪಕ ಅಧ್ಯಕ್ಷ ಕುಟ್ಟಂಚೆಟ್ಟೀರ ಮಾದಪ್ಪ, ನಿರ್ದೇಶಕಿ ವಿದ್ಯಾ ಹಾಗೂ ಮುಖ್ಯ ಶಿಕ್ಷಕ ಚೋಕಿರ ತಮ್ಮಯ್ಯ ಪ್ರಶಸ್ತಿ ಪತ್ರ ವಿತರಿಸಿದರು.

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ದರ್ಶಾ ದೇಚಮ್ಮ ಹಾಗೂ ಶಮಂತ್ ಅವರನ್ನು ಅಭಿನಂದಿಸಲಾಯಿತು.