ವಿಜಯಪುರ ಆದರ್ಶನಗರದ ಎಕ್ಸಲಂಟ್ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿನಿ ಪ್ರತಿಫಲಾ ಮೆಂಚ್ ಹಾಗೂ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ ಇನ್ನಿತರ ವಿದ್ಯಾರ್ಥಿಗಳಿಗೆ ಶಾಲೆ ಆಡಳಿತ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿತು. ರಾಜಶೇಖರ ಕೌಲಗಿ, ಮಂಜುನಾಥ ಕೌಲಗಿ ಮತ್ತಿತರರಿದ್ದಾರೆ. 
ಜಿಲ್ಲೆ

ರಾಜ್ಯಮಟ್ಟಕ್ಕೆ ಆಯ್ಕೆ

ದತ್ತಾತ್ರೇಯ ಪಿ ಕುಲಕರ್ಣಿ

ವಿಜಯಪುರ: ಸ್ಥಳೀಯ ಆದರ್ಶ ನಗರದ ಎಕ್ಸಲಂಟ್ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿನಿ ಪ್ರತಿಫಲಾ ಮೆಂಚ್ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಿಕೋಟಾದಲ್ಲಿ ಡಿ. 22 ರಂದು ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಭರತನಾಟ್ಯ ವಿಭಾಗದಲ್ಲಿ ಪ್ರತಿಫಲಾ ಉತ್ತಮ ಪ್ರದರ್ಶ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿಯ ಸಾಧೆನೆಗೆ ಸಂಸ್ಥೆಯ ಚೇರ್‌ಮನ್ ಬಸವರಾಜ ಕೌಲಗಿ, ನಿರ್ದೇಶಕರಾದ ರಾಜಶೇಖರ ಕೌಲಗಿ, ಮಂಜುನಾಥ ಕೌಲಗಿ, ಮುಖ್ಯಗುರು ಎಂ.ಐ. ಬಿರಾದಾರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.