ಜಿಲ್ಲೆ

ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಸುನಿಲ್ ಪೊನ್ನೇಟಿ

ಭಾಗಮಂಡಲ:

ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಂಜಯ್ ಎಸ್. ಶಾಟ್‌ಪುಟ್‌ನಲ್ಲಿ ಪ್ರಥಮ, ಹ್ಯಾಮರ್ ಥ್ರೋ ದ್ವಿತೀಯ, ಕೌಶಿಕ್‌ಕುಮಾರ್ ಸಿ. ಆರ್. ಲಾಂಗ್‌ಜAಪ್‌ನಲ್ಲಿ ಪ್ರಥಮ, ಟ್ರಿಪಲ್ ಜಂಪ್ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ಬಾಲಕರ ರಿಲೇ ತಂಡ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಿಲೇ ತಂಡದಲ್ಲಿ ಕೌಶಿಕ್ ಕುಮಾರ್, ಲಿಖಿತ್ ಕುಮಾರ್, ವಿಕಾಸ್ ಎ.ವಿ., ಸಂಜಯ್ ಎಸ್. ಉತ್ತಮವಾದ ಪ್ರದರ್ಶನ ನೀಡಿದ್ದಾರೆ ಎಂದು ಪ್ರಾಂಶುಪಾಲ ಲೋಕೇಶ್ ತಿಳಿಸಿದ್ದಾರೆ.