ಕೊಳ್ಳೇಗಾಲ: ಚಾಮರಾಜನಗರ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನ.6 ರಂದು ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಕಾರ್ನರ್ ಸ್ಟೋನ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಬಾಲಕಿಯರ ವಿಭಾಗದ ಬಾಸ್ಕೆಟ್ ಬಾಲ್‌ನಲ್ಲಿ ಸಂಜನಾ ಮತ್ತು ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಎಂ.ಎಸ್.ರಾಹುಲ್ ತೃತೀಯ ಸ್ಥಾನ ಪಡೆದಿದ್ದಾರೆ. ಕ್ರೀಡಾಪಟುಗಳನ್ನು ಕಾರ್ನರ್ ಸ್ಟೋನ್ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ರೂಬನ್ ಮೊಸೆಸ್, ಕಾಲೇಜಿನ ಛೇರ‌್ಮನ್ ಎನ್.ಮಹೇಶ್, ಆಡಳಿತ ಮಂಡಳಿ ಟ್ರಸ್ಟಿ ಪವನ್, ಪ್ರಾಂಶುಪಾಲ ಡಾ.ರೋಷನ್ ಪ್ರಿನ್ಸ್ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.