ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೇಲಾಟಗಳ ಕ್ರೀಡಾಕೂಟದಲ್ಲಿ ಗುಂಡು ಎಸೆತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ರಜಿಯಾ ಬೇಗಂ ಪ್ರಶಸ್ತಿ ಪತ್ರ ಸ್ವೀಕರಿಸಿದರು. ಜಿ.ಜಿ.ಬಿರಾದಾರ, ಮಂಜುನಾಥ ತಳವಾರ ಇತರರಿದ್ದರು. 
ಜಿಲ್ಲೆ

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Vijayapura

ಸಿಂದಗಿ: ಪಟ್ಟಣದ ಚನ್ನವೀರ ಸ್ವಾಮೀಜಿ ಪ್ರೌಢಶಾಲೆ ವಿದ್ಯಾರ್ಥಿನಿ ರಜಿಯಾ ಬೇಗಂ ಮ್ಯಾಗೇರಿ ಅವರು ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ರಿಪಬ್ಲಿಕ್ ಉರ್ದು ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೇಲಾಟಗಳ ಕ್ರೀಡಾಕೂಟದಲ್ಲಿ ರಜಿಯಾ ಈ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿ ಸಾಧನೆಗೆ ಸಂಸ್ಥೆ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಮುಖ್ಯ ಶಿಕ್ಷಕ ಜಿ.ಜಿ.ಬಿರಾದಾರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ ತಳವಾರ ಹರ್ಷ ವ್ಯಕ್ತಪಡಿಸಿದ್ದಾರೆ.