ಜಿಲ್ಲೆ

ಡಿ.೧೦ ರಂದು ರಾಜ್ಯ ಮಟ್ಟದ ಶೂಟಿಂಗ್ ಸ್ಪರ್ಧೆ

ಆದರ್ಶ್. ಎಂ.ಕೆ.

ಮಡಿಕೇರಿ: ಮಾಯಮುಡಿಯ ಐರನ್ ಸೈಟ್ ಶೂಟರ್ಸ್ ಸಂಸ್ಥೆ ವತಿಯಿಂದ ಹುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ತೋಕ್ ನಮ್ಮೆ ಮತ್ತು ೪ನೇ ವರ್ಷದ ರಾಜ್ಯ ಮಟ್ಟದ ಶೂಟಿಂಗ್ ಸ್ಪರ್ಧೆಯನ್ನು ಮಾಯಮುಡಿಯ ಸರ್ಕಾರಿ ಹಿರಿಯ ಪ್ರಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದು, ಸ್ಪರ್ಧೆಗೆ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿದೆ ಎಂದು ಸಂಸ್ಥೆಯ ಮುಖ್ಯಸ್ಥ ಆಪಟ್ಟೀರ ಆರ್.ಅಯ್ಯಪ್ಪ ತಿಳಿಸಿದ್ದಾರೆ.


ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾವೇರಿ ಅಸೋಸಿಯೇಷನ್ ಕೋಲುಬಾಣೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಾಯಮುಡಿ, ಕಂಗಳತ್ತು ನಾಡು ಕಾವೇರಿ ಯುವ ಸಂಘ, ಮಾಯಮುಡಿ ಮಹಿಳಾ ಸಮಾಜ, ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟ, ಕೊಡಗು ಜಾವಾ ಯೆಜ್‌ಡಿ ಮೋಟರ್ ಸೈಕಲ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಶೂಟಿಂಗ್ ಸ್ವರ್ಧೆಯಲ್ಲಿ ೫೦ ಮೀ. ಅಂತರದಲ್ಲಿ ೦.೨೨ ರೈಫಲ್ ಮೂಲಕ, ೩೦ ಮೀ. ಅಂತರದಲ್ಲಿ ೧೨ ಬೋರ್ ಕೋವಿಯ ಮೂಲಕ ಹಾಗೂ ೦.೨೨ ನಲ್ಲಿ ೩೦ ಮೀ. ಕೋಳಿ ಮೊಟ್ಟೆಗೆ ಗುರಿ ಇಟ್ಟು ಗುಂಡು ಹೊಡೆಯುವ ಸ್ಪರ್ಧೆಯು ಪ್ರತ್ಯೇಕ ವಿಭಾಗಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.


ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ವಿಜೇತ ಸ್ಪರ್ಧಿಗೆ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಡಿ.೧೦ ರಂದು ಬೆಳಿಗ್ಗೆ ೧೦.೧೫ ಗಂಟೆಗೆ ವಿಧಾನ ಪರಿಷತ್ ಮಾಜಿ ಸದಸ್ಯ, ಅಂತರರಾಷ್ಟ್ರೀಯ ಕರಾಟೆ ಪಟು ಚೆಪ್ಪುಡಿರ ಎಸ್.ಅರುಣ್ ಮಾಚಯ್ಯರವರು ತೋಕ್ ನಮ್ಮೆಯನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಡಾ.ಶುಶ್ರೂತ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಹಿರಿಯ ವಕೀಲ ಮುಕ್ಕಾಟೀರ ಆರ್.ಹರೀಶ್, ಕೋಲುಬಾಣೆ ಕಾವೇರಿ ಅಸೋಸಿಯೇಷನ್ ಅಧ್ಯಕ್ಷ ಕಾಳಪಂಡ ಟಿಪ್ಪು ಬಿದ್ದಪ್ಪ, ಮಾಜಿ ಅಧ್ಯಕ್ಷ ಕಾಳಪಂಡ ಸಿ.ಸುಧೀರ್, ಗೋಣಿಕೊಪ್ಪಲು ಕೊಡವ ಪೊಮ್ಮಕ್ಕಡ ಕೂಟದ ಅಧ್ಯಕ್ಷ ಕೊಟ್ಟಂಗಡ ವಿಜು ದೇವಯ್ಯ, ಕಾಫಿ ಬೆಳೆಗಾರ ಚೆಪ್ಪುಡೀರ ಕಿಟ್ಟು ಅಯ್ಯಪ್ಪ, ಮಾಯಮುಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚೆಪ್ಪುಡೀರ ಕಿರಣ್ ಅಪ್ಪಯ್ಯ, ಮಾಜಿ ಅಧ್ಯಕ್ಷ ಎಸ್.ಎಸ್.ಸುರೇಶ್, ಅಖಿಲ ಅಮ್ಮ ಕೊಡವ ಸಮಾಜದ ಅಧ್ಯಕ್ಷ ಬಿ.ಎಸ್.ಪ್ರತ್ಯು, ಕಂಗಳತ್ ನಾಡು ಅಧ್ಯಕ್ಷ ಬಾನಂಡ ಆಶಾ ಸೂದನ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.