ಮೈಸೂರು: ಭಾರತೀಯ ಭಾಷಾ ಉತ್ಸವದ ಅಂಗವಾಗಿ ಭಾರತೀಯ ಭಾಷಾ ಸಂಸ್ಥಾನ, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಹಾಗೂ ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ವತಿಯಿಂದ ಕಾಲೇಜು ಸಭಾಂಗನದಲ್ಲಿ ‘ಭಾರತೀಯ ಭಾಷೆಗಳು ಹಲವು-ಭಾವ ಒಂದು’ ವಿಷಯದ ಕುರಿತು ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಜೆಎಸ್‌ಎಸ್ ಕಾಲೇಜಿನ ಆರ್.ವಿ. ಅನನ್ಯ (ಪ್ರಥಮ), ದೆಹಲಿಯ ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯದ ಎನ್.ಲಕ್ಷ್ಮೀ (ದ್ವಿತೀಯ), ಜೆಎಸ್‌ಎಸ್ ಕಾಲೇಜಿನ ಆರ್. ಕುಸುಮಾಬಾಯಿ (ತೃತೀಯ) ಬಹುಮಾನ ಪಡೆದುಕೊಂಡರು.
ಸ್ಪರ್ಧೆಯಲ್ಲಿ ವಿಜೇತರಿಗೆ ಡಿ.11 ರಂದು ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಭಾರತೀಯ ಭಾಷಾ ಉತ್ಸವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರದ ಹಿರಿಯ ಸಂಶೋಧಕ ಡಾ. ಆರ್. ಚಲಪತಿ, ಜೆಎಸ್‌ಎಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಎನ್.ಎಂ. ಮಹೇಶ್ವರಿ ಸ್ಪರ್ಧೆಯ ತೀರ್ಪುಗಾರರಾಗಿದ್ದರು.
ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ.ನೀಲಗಿರಿ ಎಂ. ತಳವಾರ, ಕಾಲೇಜಿನ ಮುಖ್ಯಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ, ಪ್ರಾಂಶುಪಾಲ ಪ್ರೊ.ಎಸ್. ಪ್ರತಿಭಾ, ಹಿರಿಯ ಸಂಶೋಧಕಿ ಡಾ. ಮಾಲಿನಿ ಎನ್. ಅಭ್ಯಂಕರ್ ಇದ್ದರು.