ಜಿಲ್ಲೆ

ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ನಾಗೇಶ ಎಸ್

ಬೇಲೂರು: ಅರಸೀಕೆರೆಯ ಕಸ್ತೂರ್ ಬಾ ಗಾಂಧಿ ಟ್ರಸ್ಟ್ ಆಡಿಟೋರಿಯಂನಲ್ಲಿ ಸರ್ಕಾರಿ ನೌಕರರ ಸಂಘದಿಂದ ಅ.18ರಂದು ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಆರ್.ಮಂಜುನಾಥ್ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಬೇಲೂರು ತಾಲೂಕಿನಿಂದ ಆಯ್ಕೆಯಾಗಿರುವ ಮಕ್ಕಳು ಮತ್ತು ಪಾಲಕರು ಸರಿಯಾದ ಸಮಯಕ್ಕೆ ಹಾಜರಿರಬೇಕು ಮತ್ತು ಇವರಿಗೆ ಜಿಲ್ಲಾ ಮಟ್ಟದಿಂದ ದೂರವಾಣಿ ಕರೆ ಬರಲಿದೆ. ಕಾರ್ಯಕ್ರಮದಲ್ಲಿ ಬೇಲೂರು ತಾಲೂಕು ಸರ್ಕಾರಿ ನೌಕರರ ಸಂಘದ ಎಲ್ಲ ಪದಾಧಿಕಾರಿಗಳು, ನಿರ್ದೇಶಕರು, ಮಕ್ಕಳು, ಪಾಲಕರು ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.