ಮಡಿಕೇರಿ: ಗಾಂಧಿ ಯುವಕ ಸಂಘ(ರಿ) ಕಂಡಕರೆ ಇವರ ವತಿಯಿಂದ ಮೊದಲನೇ ವರ್ಷದ ಅಂಡರ್ ೨೦ ಕಾಲ್ಚೆಂಡು ಪಂದ್ಯಾವಳಿ ಬರುವ ಅ೨೩ ಹಾಗೂ ೨೪ ರಂದು ಚೆಟ್ಟಳ್ಳಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಎಂ.ಷರೀಫ್ ತಿಳಿಸಿದ್ದಾರೆ.
ಮೊದಲು ನೋಂದಾಯಿತ ೩೦ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಅ೧೭ ರೊಳಗೆ ೫೦೦ ರೂ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು. ಮೈದಾನ ಶುಲ್ಕ ೧೫೦೦ ರೂ ನಿಗದಿಪಡಿಸಲಾಗಿದ್ದು, ಪ್ರಥಮ ಬಹುಮಾನ ೧೧,೧೧೧ ರೂ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ೫,೫೫೫ ರೂ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಅಲ್ಲದೇ ವೈಯುಕ್ತಿಕ ಬಹುಮಾನಗಳನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
೨೦ ವರ್ಷ ಪ್ರಾಯದ ಆಟಗಾರರಿಗೆ ಮಾತ್ರ ಅವಕಾಶವಿದ್ದು, ಎಲ್ಲರೂ ತಮ್ಮ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪನವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಹಿಂದೂ ಮಲಯಾಳಿ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಶಶಿಕುಮಾರ್ ರವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ೭೪೧೧೪೭೪೮೭೮, ೯೯೦೧೮೪೬೯೪೮, ೮೧೦೫೫೫೧೧೮೭ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪಿ.ಎಂ.ಷರೀಫ್ ತಿಳಿಸಿದ್ದಾರೆ.