ಕುಶಾಲನಗರ: ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ವರು ಶಿಕ್ಷಕಿಯರಿಗೆ ರಾಜ್ಯಮಟ್ಟದ ಸದ್ಭಾವನಾ ಪ್ರಶಸ್ತಿ ಲಭಿಸಿದೆ.
ಸಾವಿತ್ರಿಬಾಯಿ ಫುಲೆ ಜಯಂತ್ಯುತ್ಸವ ಅಂಗವಾಗಿ ರಾಜ್ಯ ಸರ್ಕಾರಿ ಶಿಕ್ಷಕರ ಸಂಘಗಳ ಒಕ್ಕೂಟದ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ಶಿಕ್ಷಕರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕುಶಾಲನಗರದ ಬೆೃಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಜಿ.ಕೆ.ಜಲಜಾಕ್ಷಿ, ಮಡಿಕೇರಿಯ ಬಿ.ಅರ್.ಜಯಮ್ಮ, ಹಂಡ್ಲಿ ಶಾಲೆಯ ಮುಖ್ಯಶಿಕ್ಷಕಿ ಸುಶೀಲಾ, ತಿತಿಮತಿ ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ ಅವರನ್ನು ಸನ್ಮಾನಿಸಲಾಯಿತು.