ಜಿಲ್ಲೆ

39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಇಂದು (ಜ.14) ಆದೇಶವನ್ನು ಹೊರಡಿಸಿದ್ದಾರೆ.

ಇನ್ನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದ್ದು, ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​ ಪಾಳಯದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿಯೊಂದಿಗೆ ಚುನಾವಣೆ ಎದುರಿಸುತ್ತಿದೆ. ಇತ್ತ ಆಡಳಿತರೂಢ ಕಾಂಗ್ರೆಸ್​ ಸಹ ಅಧಿಕಾರಕ್ಕೆ ಬರುವ ಹುಮ್ಮಸ್ಸಿನಲ್ಲಿ ಪಕ್ಷದ ಚಟುವಟಿಕೆಯನ್ನು ಆರಂಭಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೊಸ ಜವಾಬ್ದಾರಿ ಹೊತ್ತಿರುವ ಬಿ.ವೈ. ವಿಜಯೇಂದ್ರ ಪಕ್ಷದ ಗೆಲುವಿಗಾಗಿ ಸಾಕಷ್ಟು ಬದಲಾವಣೆಗಳು ತರುತ್ತಿದ್ದು, ಸಂಘಟನೆಯ ದೃಷ್ಟಿಯಿಂದ ಇಂದು ಜಿಲ್ಲಾಧ್ಯಕ್ಷರುಗಳನ್ನು ನೇಮಿಸಿದ್ದಾರೆ. ನೂತನ ಜಿಲ್ಲಾಧ್ಯಕ್ಷರ ಸಂಪೂರ್ಣ ಪಟ್ಟಿ ಈ ಕೆಳಕಂಡಂತಿದೆ.