ಗಂಗೊಳ್ಳಿ: ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯ ನೂತನ ಜಿಲ್ಲಾ ಕಚೇರಿಯನ್ನು ಕೋಟೇಶ್ವರ ರಥಬೀದಿಯ ಶಾರದ ಕಲ್ಯಾಣ ಮಂಟಪದ ಕಾಂಪ್ಲೆಕ್ಸ್‌ನಲ್ಲಿ ಕೋಟೇಶ್ವರ ಗೀತಾ ಎಚ್‌ಎಸ್‌ಎನ್ ಫೌಂಡೇಶನ್‌ನ ಕೋಶಾಧಿಕಾರಿ ರಾಮ ಅಡಿಗ ಸೋಮವಾರ ಉದ್ಘಾಟಿಸಿದರು.
ಜಿಲ್ಲಾಮಟ್ಟದ ಅತ್ಯುತ್ತಮ ಎಸ್‌ಡಿಎಂಸಿ ಶಿಕ್ಷಕ ಮತ್ತು ಶಾಲಾ ಪ್ರಶಸ್ತಿ ಪಟ್ಟಿಯನ್ನು ಫೌಂಡೇಶನ್ ಅಧ್ಯಕ್ಷ ಶಂಕರ್ ಐತಾಳ್ ಬಿಡುಗಡೆಗೊಳಿಸಿ ಮಾತನಾಡಿದರು.
ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಮಟ್ಟದ ಅತ್ಯುತ್ತಮ ಎಸ್‌ಡಿಎಂಸಿ ಅಧ್ಯಕ್ಷ ಪ್ರಶಸ್ತಿಗೆ ಹೆಸ್ಕೂತ್ತುರು ಸರ್ಕಾರಿ ಹಿ.ಪ್ರಾ. ಶಾಲೆಯ ಕೃಷ್ಣ ಕೆದಿಲಾಯ ಅವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾಮಟ್ಟದ ಅತ್ಯುತ್ತಮ ಎಸ್‌ಡಿಎಂಸಿ ಶಿಕ್ಷಕ ಪ್ರಶಸ್ತಿಗೆ ಡಾ.ಕಿಶೋರ್‌ಕುಮಾರ್ ಶೆಟ್ಟಿ, ಮೋಹನ್ ಕಡಬ, ತನುಜಾಕ್ಷಿ, ತಾರದೇವಿ, ವೆಂಕಟ, ರೋಶನ್ ಬೀಬಿ, ಜಯಶ್ರೀ, ರವಿ ಎಸ್.ಪೂಜಾರಿ, ಬಾಲಕೃಷ್ಣ ಶೆಟ್ಟಿ, ವಸಂತಿ ದಾಸ್. ಜಯ ಮೊಯಲಿ, ಸುಬ್ರಹ್ಮಣ್ಯ ಉಪಾಧ್ಯ ಬಿ., ಕೃಷ್ಣ ನಾಯ್ಕ, ಆಶಾಲತಾ ಅವರನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ. ಶಾಲೆ ಪ್ರಶಸ್ತಿಗೆ ಕಾಜಾರಗುತ್ತು ಹಿರಿಯ ಪ್ರಾಥಮಿಕ ಶಾಲೆ, ಅಮಾಸೆಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಣೂರು-ಪಡುಕೆರೆ ಸರ್ಕಾರಿ ಸಂಯುಕ್ತ ಪ್ರೌಢಶಾಲೆ, ಅಚ್ಚಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾವಿನಕಟ್ಟೆ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪೆರ್ವಾಜೆ ಸುಂದರ ಪುರಾಣಿಕ ಸಂಯುಕ್ತ ಪ್ರೌಢಶಾಲೆಗಳನ್ನು ಆಯ್ಕೆ ಮಾಡಲಾಯಿತು.
ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಜಿಲ್ಲಾ ಸಮಿತಿ ಗೌರವ ಸಲಹೆಗಾರರಾದ ಮಲ್ಲಿಕಾ, ಹೆಸ್ಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಶೇಖರ್ ಉಪಸ್ಥಿತರಿದ್ದರು. ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ಪ್ರಮೋದಾ ಕುಶಲ್ ಶೆಟ್ಟಿ ಸ್ವಾಗತಿಸಿದರು. ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಜಿಲ್ಲಾ ಕಾರ್ಯದರ್ಶಿ ದೀಪಾ ಜಪ್ತಿ ನಿರೂಪಿಸಿದರು. ಪುರಸಭಾ ಘಟಕ ಕಾರ್ಯದರ್ಶಿ ವರದಾ ಸುಧಾಕರ್ ಆಚಾರ್ಯ ವಂದಿಸಿದರು.