ಜಿಲ್ಲೆ

ಸಂಖ್ಯಾಶಾಸ್ತ್ರ ದಿನಾಚರಣೆ ಜೂ. 29ರಂದು

Dharwada - Santosh Vaidya

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಭಾಗ್ಯಲಕ್ಷ್ಮೀ ನಗರದಲ್ಲಿರುವ ಎನ್​ಎಸ್​ಎಸ್​ಓ ಭವನದಲ್ಲಿ ರಾಷ್ಟ್ರೀಯ ಸಾಂಖ್ಯಿಕ ಕಚೇರಿಯಿಂದ ಜೂ. 29ರಂದು ಬೆಳಗ್ಗೆ 10.30ಕ್ಕೆ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಪಿ.ಸಿ. ಜಾಬಿನ ಕಾಲೇಜಿನ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಪ್ರೀತಿ ಜೆ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ ಹುಬ್ಬಳ್ಳಿ ನಿರ್ದೇಶಕ ಹರಿಶ್ವರನ್ ಕೆ. ಅಧ್ಯಕ್ಷತೆ ವಹಿಸುವರು. ಉಪ ನಿರ್ದೇಶಕ ಮಾದೇವಪ್ಪ, ವಿವಿಧ ಕಾಲೇಜುಗಳ ಸಂಖ್ಯಾಶಾಸ್ತ್ರ ಉಪನ್ಯಾಸಕರು, ವಿದ್ಯಾರ್ಥಿಗಳು, ಸಂಖ್ಯಾಶಾಸ್ತ್ರಜ್ಞರು, ಭಾಗವಹಿಸಲಿದ್ದಾರೆ.

ಪ್ರತಿ ವರ್ಷ ಜೂ. 29ರಂದು ಪ್ರೊ, ಪ್ರಶಾಂತಚಂದ್ರ ಮಹಾಲನೋಬಿಸ್ ಜನ್ಮದಿನವನ್ನು ಸಂಖ್ಯಾಶಾಸ್ತ್ರ ದಿನವೆಂದು ಆಚರಿಸಲಾಗುತ್ತದೆ ಎಂದು ಕಚೇರಿ ಪ್ರಕಟಣೆ ತಿಳಿಸಿದೆ.