ಹೂವಿನಹಡಗಲಿಯಲ್ಲಿ ತಹಸೀಲ್ದಾರ್ ಎ.ಎಚ್.ಮಹೇಂದ್ರಗೆ ಸಂಗೊಳ್ಳಿ ರಾಯಣ್ಣ ಯುವ ಪಡೆ ಮನವಿ ಸಲ್ಲಿಸಿತು.  
ಜಿಲ್ಲೆ

ಮೂರ್ತಿ ಭಗ್ನ ಮಾಡಿದವರನ್ನು ಬಂಧಿಸಿ: ಹಡಗಲಿಯ ಸಂಗೊಳ್ಳಿ ರಾಯಣ್ಣ ಯುವ ಪಡೆ ಆಗ್ರಹ

ಹೂವಿನಹಡಗಲಿ: ಬೆಳಗಾವಿ ಜಿಲ್ಲೆಯ ಆನೇಗೋಡ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ಯುವ ಪಡೆಯ ತಾಲೂಕು ಘಟಕ ಶನಿವಾರ ತಹಸೀಲ್ದಾರ್ ಎ.ಎಚ್.ಮಹೇಂದ್ರಗೆ ಮನವಿ ಸಲ್ಲಿಸಿತು. ಸ್ವಾತಂತ್ರೃಕ್ಕಾಗಿ ಹೋರಾಡಿದ ವೀರಯೋಧನ ಮೂರ್ತಿ ಭಗ್ನ ಮಾಡಿದ ಘಟನೆಯಿಂದ ಕರ್ನಾಟಕಕ್ಕೆ ಅವಮಾನ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಮನವಿ ಸಲ್ಲಿಸಿದರು.