ಜಿಲ್ಲೆ

ದುಶ್ಚಟಗಳಿಂದ ದೂರವಿರಿ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ ಹೇಳಿದರು.
ನಗರದ ಎಸ್​ಡಿಎಂ ಇಂಜಿನಿಯರಿಂಗ್​ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಠಿಣ ಪರಿಶ್ರಮ, ಸಮಯ ಪಾಲನೆಯಿಂದ ಉನ್ನತ ಗುರಿ ಹೊಂದಲು ಸಾಧ್ಯ. ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಮ್ಮ ಜವಾಬ್ದಾರಿ ಅರಿತು ಸದೃಢರಾಗಬೇಕು ಎಂದರು.
ಪ್ರಾಚಾರ್ಯ ಡಾ. ರಮೇಶ ಚಕ್ರಸಾಲಿ ಮಾತನಾಡಿ, ಕಾಲೇಜು ಭಾರತದ ಉನ್ನತ ಇಂಜಿನಿಯರಿಂಗ್​ ಕಾಲೇಜುಗಳಲ್ಲಿ ಸ್ಥಾನ ಪಡೆದಿದೆ. 100ಕ್ಕೂ ಹೆಚ್ಚು ಕಂಪನಿಗಳು ಕಾಲೇಜು ನೇಮಕಾತಿಗೆ ಭೇಟಿ ನೀಡಿ 500ಕ್ಕೂ ಹೆಚ್ಚು ಅರ್ಹ ಪದವೀಧರರನ್ನು ನೇಮಕ ಮಾಡಿಕೊಂಡಿವೆ. ವಿದ್ಯಾರ್ಥಿಗಳು ಕಾಲೇಜಿನ ಸೌಲಭ್ಯಗಳ ಪ್ರಯೋಜನ ಪಡೆದು ಉತ್ತಮ ಸಾಧನೆ ಮಾಡಬೇಕು ಎಂದರು.
ಡಾ. ವಿಜಯಾ ಸಿ. ಶೈಕ್ಷಣಿಕ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಎಸ್​ಡಿಎಂಇ ಸೊಸೈಟಿ ಕಾರ್ಯದರ್ಶಿ ಜೀವಂಧರಕುಮಾರ ಮಾತನಾಡಿದರು.
ಸುನೀಲ್​ ಶ್ಯಾಂಭಟ್ಟನವರ್​, ವಿವಿಧ ವಿಭಾಗಗಳ ಡೀನ್​, ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿ, ಇತರರು ಇದ್ದರು. ಪ್ರೊ.ವಿ.ಕೆ. ಪರ್ವತಿ ವಂದಿಸಿದರು.