ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್, ಅವರ ಆಪ್ತರು ಚಿಕ್ಕಮಗಳೂರು ಸಮೀಪದ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.
ರಾಜ್ಯದಲ್ಲಿ ಮತದಾನ ಮುಕ್ತಾಯಗೊಳ್ಳುತ್ತಿದ್ದಂತೆ ರಿಲ್ಯಾಕ್ಸ್ ಮೂಡಿಗೆ ಜಾರಿರುವ ಡಿಕೆ ಸಹೋದರರು ಹಾಗೂ ಅವರ ಆಪ್ತ ಮುಖಂಡರು ಚಿಕ್ಕಮಗಳೂರು ಹೊರವಲಯದ ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಮಂಗಳವಾರ ಸಂಜೆ ವೇಳೆಗೆ ಜಿಲ್ಲೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರನ್ನು ಆಪ್ತರು ಸ್ವಾಗತಿಸಿದರು. ಜಿಲ್ಲೆಯಲ್ಲಿರುವ ಅವರ ಸಂಬಂಧಿಕರ ಮನೆಗೆ ಭೇಟಿ ನೀಡಿ ಬಳಿಕ ರೆಸಾರ್ಟ್‌ಗೆ ಆಗಮಿಸಿದರು. ಮೇ 8ರಂದು ಬೆಳಗ್ಗೆ ಕಾಂಗ್ರೆಸ್ ಪ್ರಮುಖ ನಾಯಕರ ಭೇಟಿ ಮಾಡಿ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.