ಜಿಲ್ಲೆ

ಜಿಲ್ಲೆಯ ಮೂವರು ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿಯಿಂದ ವಿಶೇಷ ಆಮಂತ್ರಣ

ಮಂಜುನಾಥ ಕೋಳಿಗುಡ್ಡ

ಬೆಳಗಾವಿ : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳಲು ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.

ಬೆಳಗಾವಿಯ ಸರಸ್ವತಿ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಕೀರ್ತಿ ಜಟಗನ್ನವರ, ಸಂಜನಾ ಮುದಿಗೌಡರ ಮತ್ತು ಚಿಕ್ಕೋಡಿ ತಾಲೂಕಿನ ಕೆರೂರ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ಪಿಯು ವಿದ್ಯಾರ್ಥಿ ಸಾಗರ ಬೆಕ್ಕೇರಿ ಮತ್ತು ಬೆಳಗಾವಿ ಸರಸ್ವತಿ ಮಹಾವಿದ್ಯಾಲಯದ ಎನ್ಎಸ್ಎಸ್ ಸಂಯೋಜಕಿ ಅನಸೂಯಾ ಹಿರೇಮಠ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಹಾವಿದ್ಯಾಲಯದ ಎನ್ಎಸ್ಎಸ್ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಹಿನ್ನೆಲೆಯಲ್ಲಿ ವಿಶೇಷ ಆಹ್ವಾನಿತರಾಗಿ ವಿದ್ಯಾರ್ಥಿಗಳು ಮತ್ತು ಸಂಯೋಜಕರನ್ನು ಆಯ್ಕೆ ಮಾಡಲಾಗಿದ್ದು, ಗುರುವಾರ ಸರಸ್ವತಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಂ.ಕಾಂಬಳೆ ಸನ್ಮಾನಿಸಿ ಪ್ರೋತ್ಸಾಹಿಸಿದ್ದಾರೆ.

........